RSS

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ / Ninna premada pariya naanariye kanakaangi

10 Apr

click to play

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು.

ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು.
ನಿನ್ನೊಳಿದೆ ನನ್ನ ಮನಸು.

ಸಾಗರನ ಹೃದಯದಲಿ ರತ್ನಪರ್ವತ ಮಾಲೆ
ಮಿಂಚಿನಲಿ ಮೀವುದಂತೆ.

ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ.
ನಿನ್ನೊಳಿದೆ ನನ್ನ ಮನಸು.

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ

ಅಲೆ ಬಂದು ಕರೆಯುವುದು ನಿನ್ನೊಲುಮೆಯರಮನೆಗೆ
ಒಳಗಡಲ ರತ್ನಪುರಿಗೆ.

ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ.
ನಿನ್ನೊಳಿದೆ ನನ್ನ ಮನಸು.

ನಿನ್ನ ಪ್ರೇಮದ ಪರಿಯ ನಾನರಿಯೆ, ಕನಕಾಂಗಿ
ತಾರೆಯಾಗದೆ ಕಾಣುವೀ ಮಿಂಚು, ನಾಳೆ, ಅರ್ಧಾಂಗಿ

ಸಾಹಿತ್ಯ – ಕೆ.ಎಸ್. ನರಸಿಂಹಸ್ವಾಮಿ
ಸಂಗೀತ – ಸಿ ಅಶ್ವಥ್
ಗಾಯನ – SPB

download ninna premada pariya

 

Tags: , , , ,

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: