RSS

ಒಂದಿರುಳು ಕನಸಿನಲಿ / Ondirulu kanasinali

16 Apr

click to play

ಒಂದಿರುಳು ಕನಸಿನಲಿ ನನ್ನವಳ ಕೇಳಿದೆನು
ಚೆಂದ ನಿನಗಾವುದೆಂದು –
ನಮ್ಮೂರು ಹೊನ್ನುರೋ, ನಿಮ್ಮೂರು ನವಿಲೂರೋ
ಚೆಂದ ನಿನಗಾವುದೆಂದು.

ನಮ್ಮೂರು ಚೆಂದವೋ, ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ ?
ನಮ್ಮೂರ ಮಂಚದಲಿ ನಿಮ್ಮೂರ ಕನಸಿದನು
ವಿಸ್ತರಿಸಿ ಹೇಳಬೇಕೇ? –
ನಮ್ಮೂರು ಚೆಂದವೋ, ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ ? – ಎನ್ನರಸ,
ಸುಮ್ಮನಿರಿ ಎಂದಳಾಕೆ.

ತೌರೂರ ದಾರಿಯಲಿ ತೆಂಗುಗಳು ತಲೆದೂಗಿ
ಬಾಳೆಗಳು ತೋಳ ಬೀಸಿ ;
ಮಲ್ಲಿಗೆಯ ಮೊಗ್ಗುಗಳು ಮುಳ್ಳುಬೇಲಿಯ ವರಿಸಿ
ಬಳುಕುತಿರೆ ಕಂಪ ಸೂಸಿ ;
ನಗುನಗುತ ನಮ್ಮೂರ ಹೆಣ್ಣುಗಳು ಬರುತಿರಲು
ನಿಮ್ಮೂರ ಸಂತೆಗಾಗಿ,
ನವಿಲೂರಿಗಿಂತಲೂ ಹೊನ್ನೂರೆ ಸುಖವೆಂದು
ನಿಲ್ಲಿಸಿತು ಪ್ರೇಮ ಕೂಗಿ –

ನಮ್ಮೂರು ಚೆಂದವೋ, ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ ? – ಎನ್ನರಸ
ಸುಮ್ಮನಿರಿ ಎಂದಳಾಕೆ.

ನಿಮ್ಮೂರ ಬಂಡಿಯಲಿ ನಮ್ಮೂರ ಬಿಟ್ಟಾಗ
ಓಡಿದುದು ದಾರಿ ಬೇಗ ;
ಪುಟ್ಟ ಕಂದನ ಕೇಕೆ ತೊಟ್ಟಿಲನು ತುಂಬಿತ್ತು –
ನಿಮ್ಮೂರ ಸೇರಿದಾಗ.
ಊರ ಬೇಲಿಗೆ ಬಂದು, ನೀವು ನಮ್ಮನು ಕಂಡು
ಕುಶಲವನು ಕೇಳಿದಾಗ,
ತುಟಿಯಲೇನೋ ನಿಂದು, ಕಣ್ಣಲೇನೋ ಬಂದು
ಕೆನ್ನೆ ಕೆಂಪಾದುದಾಗ.

ನಮ್ಮೂರು ಚೆಂದವೋ, ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ ? – ಎನ್ನರಸ
ಸುಮ್ಮನಿರಿ ಎಂದಳಾಕೆ.

ಸಾಹಿತ್ಯ – ಕೆ ಎಸ್ ನರಸಿಂಹಸ್ವಾಮಿ
ಸಂಗೀತ – ಸಿ ಅಶ್ವಥ್
ಗಾಯನ – SPB

download ondirulu kanasinali

 

Tags: , , , , , ,

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: