RSS

ಕುರಿಗಳು ಸಾರ್ ಕುರಿಗಳು / kurigalu saar kurigalu :-)

03 May

click to play

ಕುರಿಗಳು ಸಾರ್ ಕುರಿಗಳು;
ಸಾಗಿದ್ದೇ
ಗುರಿಗಳು.
ಮಂದೆಯಲಿ ಒಂದಾಗಿ, ಸ್ವಂತತೆಯೆ ಬಂದಾಗಿ
ಅದರ ಬಾಲ ಇದು ಮತ್ತೆ ಇದರ ಬಾಲ ಅದು ಮೂಸಿ
ದನಿ ಕುಗ್ಗಿಸಿ, ತಲೆ ತಗ್ಗಿಸಿ
ಅಂಡಲೆಯುವ ನಾವು ನೀವು –
ಕುರಿಗಳು ಸಾರ್ ಕುರಿಗಳು;

ಎಡ ದಿಕ್ಕಿಗೆ ಬಲ ದಿಕ್ಕಿಗೆ, ಒಮ್ಮೆ ದಿಕ್ಕು ಪಾಲಾಗಿ,
ಹೇಗೆ ಹೇಗೊ ಏಗುತಿರುವ,
ಬರೀ ಕಿರುಚಿ ರೇಗುತಿರುವ,
ನೊಣ ಕೂತರೆ ಬಾಗುತಿರುವ,
ತಿನ್ನದಿದ್ದರು ತೇಗುತಿರುವ,
ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ
ನಾವು ನೀವು ಅವರು ಇವರು
ಕುರಿಗಳು ಸಾರ್ ಕುರಿಗಳು.

ನಮ್ಮ ಕಾಯ್ವ ಕುರುಬರು:
ಶಾನುಭೋಗ ಗೀಚಿದ್ದಕ್ಕೆ ಹೆಬ್ಬೆಟ್ಟನು ಒತ್ತುವವರು.
ಜಮಾಬಂದಿಗಮಲ್ದಾರ ಬರಲು, ನಮ್ಮೊಳೊಬ್ಬನನ್ನ
ಮೆಚ್ಚಿ, ಮಸೆದ ಮಚ್ಚಹಿರಿದು ಕತ್ತ ಕಚಕ್ಕೆಂದು ಕೊಚ್ಚಿ,
ಬಿರಿಯಾನಿಯ ಮೆಹರುಬಾನಿ ಮಾಡಿ ಕೈಯ ಜೋಡಿಸುತ್ತ
ಕಿಸೆಗೆ ಹಸಿರುನೋಟು ತುರುಕಿ, ನುಡಿಗೆ ಬೆಣ್ಣೆ ಹಚ್ಚುವವರು.
ಬಿಸಿಲಲ್ಲಿ ನಮ್ಮದೂಡಿ, ಮರದಡಿಯಲಿ ತಾವು ಕೂತು
ಮಾತು, ಮಾತು, ಮಾತು, ಮಾತು:
ಮಾತಿನ ಗೈರತ್ತಿನಲ್ಲೆ ಕರಾಮತ್ತು ನಡೆಸುವವರು.

ನಮ್ಮ ಮೈಯ ತುಪ್ಪಟವ ರವಷ್ಟು ಬಿಡದ ಹಾಗೆ ಸವರಿ
ಕಂಬಳಿಗಳ ನೇಯುವಂಥ ಯೋಜನೆಗಳ ಹಾಕುವವರು.

ತಳವೂರಿದ ಕುರುಬ ಕಟುಕನಾದ; ಅವನ ಮಚ್ಚೊ ಆಹ!
ಏನು ಹೊಳಪು, ಏನು ಜಾದು, ಏನು ಮೋಹ!
ಕಣ್ಣುಕುಕ್ಕಿ ಸೊಕ್ಕಿರುವ,
ಕತ್ತನದಕೆ ತಿಕ್ಕಿರುವ, ಹೋಗಿಹೋಗಿ ನೆಕ್ಕಿರುವ,
ನಾವು, ನೀವು, ಅವರು, ಇವರು
ಕುರಿಗಳು ಸಾರ್ ಕುರಿಗಳು.

*** ಕೆ. ಎಸ್. ನಿಸಾರ್ ಅಹಮದ್ ***
*** ರಾಜು ಅನಂತಸ್ವಾಮಿ ***

download kurigalu saar kurigalu

 

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: