RSS

ಬಂಗಾರ ನೀರ ಕಡಲಾಚೆಗೀಚೆಗಿದೆ / bangara neera kadalaachegide

06 ಮೇ

click to play

ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ (೨)

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ ||

ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೆರಿತದ ಜೀವ ಅದರೊಳಗೆ ಒಳಗೆ ಒಳಗೆ
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ
ಅಂಬಿಗನು ಬಂದ ನಂಬಿಗನು ಬಂದ ಬಂದದ ದಿವ್ಯ ಘಳಿಗೆ ||

ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವುದು ಇದರ ಸೆಲೆಯು
ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು ||

ಬಂದವರ ಬಳಿಗೆ ಬಂದದ ಮತ್ತು ನಿಂದವರ ನೆರೆಗೂ ಬಂದದೋ ಬಂದದ
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ ||

*** ದ.ರಾ.ಬೇಂದ್ರೆ ***
*** ಸಿ ಅಶ್ವಥ್ ***

download bangara neera kadalaachegeeche

 

2 responses to “ಬಂಗಾರ ನೀರ ಕಡಲಾಚೆಗೀಚೆಗಿದೆ / bangara neera kadalaachegide

  1. Gopal Wajapeyi

    ಏಪ್ರಿಲ್ 10, 2015 at 9:40 ಫೂರ್ವಾಹ್ನ

    1.
    ಹರಿತದ ಭಾವ ಬೆರಿತದಾ ಜೀವ badalu
    ಹರಿತದ ಭಾವ ಬೆರಿತದ ಜೀವ aagabeku.
    2.
    ಬಂದದಾ ದಿವ್ಯ ಘಳಿಗೆ badalu
    ಬಂದದ ದಿವ್ಯ ಘಳಿಗೆ aagabeku.
    3.
    ಬಂದವರ ಬಳಿಗೆ ಬಂದದ ಮತ್ತು ನಿಂದವರಾ badalu
    ಬಂದವರ ಬಳಿಗೆ ಬಂದದ ಮತ್ತು ನಿಂದವರ aagabeku.

    ಇದು sariyaada text mattu uchhaaraNe.

     

ನಿಮ್ಮ ಟಿಪ್ಪಣಿ ಬರೆಯಿರಿ