RSS

ನಗುವಾಗ ನಕ್ಕು / naguvaaga nakku

23 ಜೂನ್

click to play

ನಗುವಾಗ ನಕ್ಕು ಅಳುವಾಗ ಅತ್ತು ಮುಗಿದಿತ್ತು ಅರ್ಧ ದಾರಿ
ಹೂಬಳ್ಳಿಯಿಂದ ಹೆಮ್ಮರನ ಎದೆಗೆ ಬಿಳಿ ಬಿಳಿಯ ಹಕ್ಕಿ ಹಾರಿ||ಪ||

ನಸು ನಕ್ಕು ನಾಚಿ ನೀ ಬಳಿಗೆ ಬಂದೆ ಕೆಂಪಾದ ಹೂಗಳಲ್ಲಿ
ಆ ಮೊದಲ ದಿನದ ಅದೆ ನಲಿವ ಕಂಡೆ ಹೂವೆದೆಯ ಹನಿಗಳಲ್ಲಿ
ನಕ್ಷತ್ರ ಲೋಕ ತೆರೆದಿತ್ತು ಮೇಲೆ ಹೊಸ ಭಾವಗೀತೆಯಂತೆ
ಎದೆಯಾಳದಿಂದ ತುಳುಕಿತ್ತು ಜ್ವಾಲೆ ಬಾಂದಳದ ಮಿಂಚಿನಂತೆ||ನಗುವಾಗ||

ಮೈ ಮೈಗೆ ಸೋಂಕಿ ಆಗಿತ್ತು ಸಂಜೆ ಹುಣ್ಣಿಮೆಯ ತಂಪಿನಲ್ಲಿ
ನಾ ನಿನ್ನ ಕಂಡೆ ನಿನ್ನೊಲವ ಕಂಡೆ ಮಲ್ಲಿಗೆಯ ಕಂಪಿನಲ್ಲಿ
ಓ ನನ್ನ ನಲ್ಲೆ ನಗುತಿರುವೆಯಲ್ಲೆ ನನ್ನೆದೆಯ ತುಂಬ ನೀನೆ
ಈ ಕತ್ತಲೊಳಗೆ ಹುಡುಕುವುದು ಬೇಡ ಇಲ್ಲಿಹುದು ನಿನ್ನ ವೀಣೆ||ನಗುವಾಗ||

ಸಾಹಿತ್ಯ – ಕೆ.ಎಸ್. ನರಸಿಂಹಸ್ವಾಮಿ
ಸಂಗೀತ – ?
ಗಾಯನ – ರಾಜು ಅನಂತಸ್ವಾಮಿ

download naguvaaga nakku

 

ಟ್ಯಾಗ್ ಗಳು: , , , , ,

ನಿಮ್ಮ ಟಿಪ್ಪಣಿ ಬರೆಯಿರಿ