RSS

ಹಚ್ಚೇವು ಕನ್ನಡದ ದೀಪ / hachevu kannadada deepa

11 ಆಗಸ್ಟ್

ನೂರನೆಯ ಭಾವಗೀತೆ

click to play

ಹಚ್ಚೇವು ಕನ್ನಡದ ದೀಪ ಕರುನಾಡ ದೀಪ ಸಿರಿನುಡಿಯ ದೀಪ
ಒಲವೆತ್ತಿ ತೋರುವ ದೀಪ

ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು ಅಲ್ಲಲ್ಲಿ ಕರಣ ಚಾಚೇವು
ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು
ಮರೆತೇವು ಮರವ ತೆರೆದೇವು ಮನವ ಎರೆದೇವು ಒಲವ ಹಿರಿನೆನಪಾ
ನರನರವನೆಲ್ಲ ಹುರಿಗೊಳಿಸಿ ಹೊಸದು ಹಚ್ಚೇವು ಕನ್ನಡದ ದೀಪ || ಹಚ್ಚೇವು ||

ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯರೂಪ ಅಚ್ಚಳಿಯದಂತೆ ತೋರೇವು
ಒಡಲೊಳಲ ಕೆಚ್ಚಿನ ಕಿಡಿಗಳನ್ನು ಗಡಿನಾಡಿನಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿನದು ಭೀತಿ ನಾಡೊಲವೆ ನೀತಿ ಹಿಡಿನೆನಪಾ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ || ಹಚ್ಚೇವು ||

ನಮ್ಮವರು ಗಳಿಸಿದ ಹೆಸರುಳಿಸಲು ಎಲ್ಲಾರು ಒಂದುಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ ಮಾತೆಯನು ಪೂಜೆಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ ಕಡೆದೇವು ಇರುಳ ಪಡೆದೇವು ತಿರುಳ ಹಿರಿನೆನಪಾ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ || ಹಚ್ಚೇವು ||

ಸಾಹಿತ್ಯ – ಡಿ.ಎಸ್. ಕರ್ಕಿ
ಸಂಗೀತ – ?
ಗಾಯನ – ಸಮೂಹ ಗಾಯನ

download hachevu kannadada deepa

Advertisements
 

ಟ್ಯಾಗ್ ಗಳು: , , , , ,

2 responses to “ಹಚ್ಚೇವು ಕನ್ನಡದ ದೀಪ / hachevu kannadada deepa

  1. ಬದರಿನಾಥ ಪಳವಳ್ಳಿಯ ಕವನಗಳು

    ಆಗಷ್ಟ್ 12, 2012 at 6:00 ಅಪರಾಹ್ನ

    ಇಷ್ಟು ದಿನ ಅನ್ಯಾಯವಾಗಿ ಈ ಬ್ಲಾಗ್ ನನ್ನ ಕಣ್ಣಿಗೆ ಬೀಳಲಿಲ್ಲವಲ್ಲ ಅನ್ನೋ ವ್ಯಥೆ ಕಾಡುತಿದೆ. ಇನ್ನು ನಾನು ಪದೇ ಪದೇ ಬರುತ್ತೇನೆ.
    http://www.badari-poems.blogspot.com

     

ನಿಮ್ಮದೊಂದು ಉತ್ತರ

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: