RSS

ಸ್ತ್ರೀ ಎಂದರೆ ಅಷ್ಟೇ ಸಾಕೆ / stree endare ashte saake

17 ಆಗಸ್ಟ್

click to play

ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ

ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೇ ಸಾಕೆ

ಹಸುರನುಟ್ಟ ಬೆಟ್ಟಗಳಲಿ
ಮೊಲೆಹಾಲಿನ ಹೊಳೆಯನಿಳಿಸಿ
ಬಯಲ ಹಸುರ ನಗಿಸಿದಾಕೆ

ನಿನಗೆ ಬೇರೆ ಹೆಸರು ಬೇಕೆ?
ಸ್ತ್ರೀ ಎಂದರೆ ಅಷ್ಟೇ ಸಾಕೆ?

ಮರ ಗಿಡ ಹೂ ಮುಂಗುರುಳನು
ತಂಗಾಳಿಯ ಬೆರಳ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ

ನಿನಗೆ ಬೇರೆ ಹೆಸರು ಬೇಕೆ?
ಸ್ತ್ರೀ ಎಂದರೆ ಅಷ್ಟೇ ಸಾಕೆ?

ಮನೆಮನೆಯಲಿ ದೀಪ ಮುಡಿಸಿ
ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ

ನಿನಗೆ ಬೇರೆ ಹೆಸರು ಬೇಕೆ?
ಸ್ತ್ರೀ ಎಂದರೆ ಅಷ್ಟೇ ಸಾಕೆ?

ಸಾಹಿತ್ಯ – ಜಿ. ಎಸ್. ಶಿವರುದ್ರಪ್ಪ
ಸಂಗೀತ / ಗಾಯನ – ಸಿ ಅಶ್ವಥ್

download stree endare ashte saake

 

ಟ್ಯಾಗ್ ಗಳು: , , , , , ,

1 responses to “ಸ್ತ್ರೀ ಎಂದರೆ ಅಷ್ಟೇ ಸಾಕೆ / stree endare ashte saake

  1. kalpitha kudipady

    ನವೆಂಬರ್ 29, 2017 at 8:13 ಅಪರಾಹ್ನ

    ಈ ಬ್ಲಾಗ್ನಲ್ಲಿ ಒಳ್ಳೆಯ ಕೆಲಸ ಮಾಡುತ್ತಿರುವಿರಿ. ಎಲ್ಲಾ ಪ್ರಯತ್ನಕ್ಕೆ ಧನ್ಯವಾದಗಳು.

     

ನಿಮ್ಮ ಟಿಪ್ಪಣಿ ಬರೆಯಿರಿ