RSS

Category Archives: ಡಿ.ವಿ.ಗುಂಡಪ್ಪ

ಬದುಕು ಜಟಕಾ ಬಂಡಿ / baduku jataka bandi

click to play

ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ
ಕುದುರೆ ನೀನ್ ಅವನು ಪೇಳ್ದಂತೆ ಪಯಣಿಗನು
ಮದುವೆಗೋ ಮಸಣಕೋ ಹೋಗೆಂದ ಕಡೆಗೋಡು
ಪದಕುಸಿಯೇ ನೆಲವಿಹುದು ಮಂಕುತಿಮ್ಮ

ಅಕ್ಕಿಯೊಳಗನ್ನವನು ಮೊದಲಾರು ಕಂಡವರು
ಅಕ್ಕರದ ಬರಹಕ್ಕೆ ಮೊದಲಿಗನದಾರು
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ
ದಕ್ಕುವುದೇ ಜಸ ನಿನಗೆ ಮಂಕುತಿಮ್ಮ

ಇಳೆಯಿಂದ ಮೊಳಕೆವೊಗೆ ಒಂದು ತಮಟೆಗಳಿಲ್ಲ
ಫಲ ಮಾಗುವಂದು ತುತ್ತೂರಿ ದನಿಯಿಲ್ಲ
ಬೆಳಕೀವ ಸೂರ್ಯ ಚಂದ್ರರದೊಂದು ಸದ್ದಿಲ್ಲ
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
ಕಲ್ಲು ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು – ಮಂಕುತಿಮ್ಮ

ನಗುವು ಸಹಜದ ಧರ್ಮ ನಗಿಸುವುದು ಪರಧರ್ಮ
ನಗುವ ಕೇಳುತ ನಗುವುದತಿಶಯದ ಧರ್ಮ
ನಗುವ ನಗಿಸುವ ನಗಿಸಿ ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ ||

ಸಾಹಿತ್ಯ – ಡಿ.ವಿ.ಗುಂಡಪ್ಪ
ಸಂಗೀತ – ಮೈಸೂರು ಅನಂತಸ್ವಾಮಿ
ಗಾಯನ – ರಾಜು ಅನಂತಸ್ವಾಮಿ

download baduku jataka bandi

 

ಟ್ಯಾಗ್ ಗಳು: , , , ,