RSS

Category Archives: ನರಸಿಂಹ ನಾಯಕ್

ದಿನ ಹೀಗೆ ಜಾರಿ ಹೋಗಿದೆ / dina heege jaari hogide

click to play

[audio http://cl.ly/1W2S1H2a2k0e/dina_heege_jaari_hogide.mp3]

ದಿನ ಹೀಗೆ ಜಾರಿ ಹೋಗಿದೆ
ನೀನೀಗ ಬಾರದೆ
ಜತೆಯಿರದ ಬಾಳ ಜಾತ್ರೆಯಲಿ
ಸೊಗಸೇನಿದೆ ।।

ಅರಳಿ ಅನೇಕ ಹೂಗಳು
ಬರಿದೆ ಕಾದಿವೆ
ಹಿಮದ ಕಠೋರ ಕೈಯಲಿ
ನರಳಿ ಕೆಡೆದಿವೆ ।। ದಿನ ।।

ಜತೆಯ ಕಾಣದೀಗ ಹಕ್ಕಿ
ಅನಾಥವಾಗಿದೆ
ಋತು ಚೈತ್ರ ಜಾರಿ ಹೋಗಿದೆ
ಗ್ರೀಷ್ಮ ಬರುತಿದೆ ।। ದಿನ ।।

ದುಗುಡ ನಿಧಾನ ಬೆಳೆಯುತ
ಬಾಳ ಮುಸುಕಿದೆ
ಉಳಿದೇನಿತಾಂತ ಕಾಯುತ
ಕನಸು ಮಾಸಿದೆ ।। ದಿನ ।।

ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ –  ನರಸಿಂಹ ನಾಯಕ್

download dina heege jaari hogide

 

 

ಟ್ಯಾಗ್ ಗಳು: , , , ,

ಈ ದಿನಾಂತ ಸಮಯದಲಿ / ee dinaanta samayadali

click to play

ಈ ದಿನಾಂತ ಸಮಯದಲಿ
ಉಪವನ ಏಕಾಂತದಲಿ
ಗೋಧೂಳಿ ಹೊನ್ನಿನಲಿ

ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||

ನಾ ಬಿಸುಸುಯ್ಯುವ ಹಂಬಲವೋ
ಶುಭ ಸಮ್ಮಿಲನದ ಕಾತರವೋ
ಬಾ ಇನಿಯ ಕರೆವೆ ನೊಂದು

ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||

ತನುಮನದಲಿ ನೀನೇ ನೆಲೆಸಿ
ಕಣಕಣವೂ ನಿನ್ನ ಕನಸಿ
ಕಣ್ಣು ಹನಿದು ಕರೆವೆ ನಿನ್ನ

ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||

ಇಳೆಗಿಳಿದಿದೆ ಇರುಳ ನೆರಳು
ದನಿ ಕಳೆದಿದೆ ಹಕ್ಕಿಗೊರಳು
ಶಶಿ ಮೆರೆಸಿರೆ ತೋರು ಬೆರಳು

ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||

ಹಗಲಿರುಳಿನ ಈ ನಿರೀಕ್ಷೆ
ಈ ಯಾಚನೆ ಪ್ರಣಯ ಭಿಕ್ಷೆ
ಮೊರೆಯಾಲಿಸಿ ಕಳೆಯೆ ಶಿಕ್ಷೆ

ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||

ಸಾಹಿತ್ಯ – ಕೆ. ಎಸ್. ನಿಸಾರ್ ಅಹಮದ್
ಸಂಗೀತ – ಸಿ ಅಶ್ವಥ್
ಗಾಯನ – ನರಸಿಂಹ ನಾಯಕ್ / ಇಂದು ವಿಶ್ವನಾಥ್

download ee dinaanta samayadali

 

ಟ್ಯಾಗ್ ಗಳು: , , , , , , ,

ದೀಕ್ಷೆಯ ತೊಡು ಇಂದೇ / deeksheya todu inde

click to play

ದೀಕ್ಷೆಯ ತೊಡು ಇಂದೇ
ಕಂಕಣ ಕಟ್ಟಿಂದೇ
ಕನ್ನಡ ನಾಡೊಂದೇ
ಇನ್ನೆಂದೂ ತಾನೊಂದೇ ।।

ನೃಪತುಂಗನ ದೊರೆಮುಡಿ ಸಾಕ್ಷಿ
ಪಂಪನ ಪದ ಧೂಳಿಯ ಸಾಕ್ಷಿ
ಕೂಡಲ ಸಂಗನ ಅಡಿ ಸಾಕ್ಷಿ
ಗದುಗಿನ ಕವಿದೇವನ ಸಾಕ್ಷಿ ।। ದೀಕ್ಷೆಯ ।।

ಇಡು ಸಹ್ಯಾದ್ರಿಯ ಮೇಲಾಣೆ
ಇಡು ಕಾವೇರಿಯ ಮೇಲಾಣೆ
ಇಡು ಚಾಮುಂಡಿಯ ಮೇಲಾಣೆ
ಇಡು ಗೊಮ್ಮಟ ಗುರುದೇವಾಣೆ ।। ದೀಕ್ಷೆಯ ।।

ಕಾಣಲಿ ಕನ್ನಡ ವ್ಯೋಮಾಕ್ಷಿ
ನಿಲ್ಲಲಿ ರವಿ ಚಂದ್ರರ ಸಾಕ್ಷಿ
ಕೇಳಲಿ ಕನ್ನಡ ಪಶು ಪಕ್ಷಿ
ಸರ್ವ ದೇವರೂ ಶ್ರೀ ಸಾಕ್ಷಿ ।। ದೀಕ್ಷೆಯ ।।

ಇಡು ನಿನ್ನಯ ಸತಿಯಾಣೆ
ಇಡು ನಿನ್ನಯ ಪತಿಯಾಣೆ
ಮಕ್ಕಳ ಮೇಲಾಣೆ
ಅಕ್ಕರೆ ಮೇಲಾಣೆ
ಗುರುದೇವರ ಆಣೆ
ನನ್ನಾಣೆ
ನಿನ್ನಾಣೆ
ತೊಡು ದೀಕ್ಷೆಯ
ಇಡು ರಕ್ಷೆಯ
ಕಂಕಣ ಕಟ್ಟಿಂದೇ
ಇನ್ನೆಂದೂ ತಾನೊಂದೇ
ಕನ್ನಡ ನಾಡೊಂದೇ

ಸಾಹಿತ್ಯ – ಕುವೆಂಪು

ಸಂಗೀತ – ಸಿ ಅಶ್ವಥ್

ಗಾಯನ – ರತ್ನಮಾಲ ಪ್ರಕಾಶ್ / ನರಸಿಂಹ ನಾಯಕ್

download deeksheya todu inde

 

ಟ್ಯಾಗ್ ಗಳು: , , , , , , ,

ಬಾ ಫಾಲ್ಗುಣ ರವಿ ದರ್ಶನಕೆ / baa phaalguna ravi darshanake

click to play

[audio http://cl.ly/1a0B2X042a01/download/Baa_Phalguna_Ravi.mp3]

ಶಿವಮಂದಿರಸಮ ವನಸುಂದರ ಸುಮಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!

ಕುಂಕುಮ ಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವ ರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ ಪ್ರಾಣಾಗ್ನಿಯ ಹೊಳೆಹರಿಯಿಸಿ ರವಿ ದಯಮಾಡುವನು || ಬಾ ||

ತೆರೆತೆರೆಯಾಗಿಹ ನೊರೆನೊರೆ ಕಡಲೆನೆ ನೋಡುವ ಕಣ್ಣೋಡುವವರೆಗೆ
ಬನಸಿರಿ ತುಂಬಿದ ಕಣಿವೆಯ ಹಂಬಿರೆ ಧೂಳೀಸಮಹಿಮ ಬಾನ್‌ಕರೆಗೆ
ಪ್ರತಿಭೆಯ ಹೋಮಾಗ್ನಿಯ ಮೇಲೆ ಕವಿಮನ ತಾನುರಿದುರಿದೇಳೆ
ಮರಗಿಡದಲಿ ಜಡದೊಡಲಲಿ ಇದೆಕೋ ಸ್ಪಂದಿಸುತಿದೆ ಭಾವಜ್ವಾಲೆ || ಬಾ ||

ವರ್ಣನದಿಂದ್ರಿಯ ನಂದನವನು ದಾಂಟುತೆ ದರ್ಶನ ಮುಕ್ತಿಯ ಸೇರಿ
ವ್ಯಕ್ತಿತೆ ಮೈಮರೆವುದು ಸೌಂದರ್ಯ ಸಮಾಧಿಯೊಳಾನಂದವ ಹೀರಿ
ಸರ್ವೇಂದ್ರಿಯ ಸುಖನಿಧಿ ಅಲ್ಲಿ; ಸರ್ವಾತ್ಮನ ಸನ್ನಿಧಿ ಅಲ್ಲಿ
ಸಕಲಾರಾಧನ ಸಾಧನಬೋಧನ ಅನುಭವರಸ ತಾನಹುದಲ್ಲಿ || ಬಾ ||

ಸಾಹಿತ್ಯ – ಕುವೆಂಪು
ಸಂಗೀತ – ?
ಗಾಯನ – ನರಸಿಂಹ ನಾಯಕ್

download baa phaalguna ravi darshanake

 

ಟ್ಯಾಗ್ ಗಳು: , , , , , ,

ಓ ನನ್ನ ಚೇತನ / O nanna chetana

click to play

ಮೈಸೂರು ಅನಂತಸ್ವಾಮಿ ದನಿಯಲ್ಲಿ

ಸಮೂಹ ಗೀತೆ

ರತ್ನಮಾಲ ಪ್ರಕಾಶ್ ಹಾಗೂ ಪುತ್ತೂರು ನರಸಿಂಹನಾಯಕ್ ದನಿಯಲ್ಲಿ

ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪ ರೂಪಗಳನು ದಾಟಿ,
ನಾಮ ಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!

ಅನಂತ ತಾನ್‌ ಅನಂತವಾಗಿ
ಆಗುತಿಹನೆ ನಿತ್ಯಯೋಗಿ;
ಅನಂತ ನೀ ಅನಂತವಾಗು:
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಸಾಹಿತ್ಯ – ಕುವೆಂಪು
ಸಂಗೀತ – ಮೈಸೂರು ಅನಂತಸ್ವಾಮಿ / ಸಿ ಅಶ್ವಥ್

download o nanna chetana — group singing version

download o nanna chetana — solo singing version – Mysore Ananthaswamy

download o nanna chetana – ratnamala narasimhanayak version

 

ಟ್ಯಾಗ್ ಗಳು: , , , , ,

ಸಂಜೆಯ ರಾಗಕೆ ಬಾನು ಕೆಂಪೇರಿದೆ / sanjeya raagake baanu

click to play

ಸಂಜೆಯ ರಾಗಕೆ ಬಾನು ಕೆಂಪೇರಿದೆ
ತಿಂಗಳು ಮೂಡಿ ಬೆಳಕಿನ ಕೋಡಿ ಚೆಲ್ಲಾಡಿದೆ,
ಈಗ ರಂಗೇರಿದೆ ||

ಮರಗಿಡ ನೆಲದ ಮೇಲೆ ನೆರಳನು ಹಾಸಿದೆ
ಹೂಗಳ ದಳಗಳ ನಡುವೆ ನಿನ್ನದೇ ಬೆರಳಿದೆ ||

ಗಾಳಿಯ ಜೊತೆಯ ಗಂಧವು ನಿನ್ನನ್ನು ಸವರಿದೆ
ಒಳಗೂ ಹೊರಗೂ ವ್ಯಾಪಿಸಿ ಯೌವ್ವನ ಕೆರಳಿದೆ ||

ಕೊಳದಲಿ ಮೂಡಿದ ಬಿಂಬವು ಹೂಗಳ ಮರೆಸಿದೆ
ದಳದಲಿ ಎಂತಹ ಕನಸಿನ ಲೋಕವು ತೆರೆದಿದೆ ||

ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ನರಸಿಂಹ ನಾಯಕ್

download sanjeya raagake baanu kemperide

 

ಟ್ಯಾಗ್ ಗಳು: , , , , , ,