RSS

Category Archives: ಶಿವಮೊಗ್ಗ ಸುಬ್ಬಣ್ಣ

ಬನ್ನಿ ಭಾವಗಳೆ ಬನ್ನಿ ನನ್ನೆದೆಗೆ / banni bhaavagale banni nannedege

click to play

[audio http://cl.ly/062n3F353g0f/Banni_Bhaavagale.mp3]

ಬನ್ನಿ ಭಾವಗಳೆ ಬನ್ನಿ ನನ್ನೆದೆಗೆ
ಕರೆಯುವೆ ಕೈ ಬೀಸಿ
ಬತ್ತಿದೆದೆಯಲ್ಲಿ ಬೆಳೆಯಿರಿ ಹಸಿರನು
ಪ್ರೀತಿಯ ಮಳೆ ಸುರಿಸಿ ।।

ಬನ್ನಿ ಸಂಜೆ ಹೊಂಬಿಸಿಲಿನ ಹೊಳೆಯೊಳು
ಮೀಯುವ ಮುಗಿಲಿನಲಿ
ತವರಿನೆದೆಗೆ ತಂಪೆರೆಯುವ ಮೇಘದ
ಪ್ರೀತಿಯ ಧಾರೆಯಲಿ ।। ಬನ್ನಿ ।।

ಲೋಕಕೆ ಹೊದಿಸಿದ ಕರಿತೆರೆ ಸರಿಸುವ
ಅರುಣೋದಯದಲ್ಲಿ
ಪಕ್ಷಕ್ಕೊಮ್ಮೆ ಬಿಳಿಪತ್ತಲ ನೇಯುವ
ಹುಣ್ಣಿಮೆ ಹಸ್ತದಲಿ ।। ಬನ್ನಿ ।।

ಬನ್ನಿ ಬನ್ನಿ ನನ್ನೆದೆಯ ಬಯಲಿದು
ಬಿತ್ತದ ಕನ್ನೆನೆಲ
ಬೆಳೆಯಿರಿ ಇಲ್ಲಿ ಬಗೆ ಬಗೆ ತೆನೆಯ
ನಮಿಸುವೆ ನೂರು ಸಲ

ನಿಮ್ಮನೆ ಕನವರಿಸಿ
ನಿಮಗೇ ಮನವರಿಸಿ
ಕಾಯುತ್ತಿರುವೆನು ಕ್ಷಣಕ್ಷಣವೂ
ಎದೆಯನು ಹದಗೊಳಿಸಿ ।। ಬನ್ನಿ ।।

ಸಾಹಿತ್ಯ – ಎನ್  ಎಸ್. ಲಕ್ಷ್ಮೀನಾರಾಯಣ ಭಟ್ಟ
ಸಂಗೀತ – ಸಿ ಅಶ್ವಥ್
ಗಾಯನ – ಶಿವಮೊಗ್ಗ ಸುಬ್ಬಣ್ಣ
 

 

download banni bhaavagale banni nannedege

 

 

ಟ್ಯಾಗ್ ಗಳು: , , , , , ,

ಎಲ್ಲಾದರು ಇರು ಎಂತಾದರು ಇರು / ellaadaru iru entaadaru iru

click to play

ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು ।। ಎಲ್ಲಾದರು ।।
ನೀ ಮೆಟ್ಟುವ ನೆಲ ಅದೇ ಕರ್ನಾಟಕ
ನೀನೇರುವ ಮಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಶ್ರೀಗಂಧದ ಮರ
ನೀ ಕುಡಿಯುವ ನೀರ್ ಕಾವೇರಿ
ಪಂಪನನೋದುವ ನಿನ್ನ ನಾಲಗೆ ಕನ್ನಡವೇ ಸತ್ಯ
ಕುಮಾರವ್ಯಾಸನನಾಲಿಪ ಕಿವಿಯದು ಕನ್ನಡವೇ ನಿತ್ಯ
ಹರಿಹರ ರಾಘವರಿಗೆ ಎರಗುವ ಮನ
ಹಾಳಾಗಿಹ ಹಂಪೆಗೆ ಕೊರಗುವ ಮನ
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ
ಮಲೆನಾಡಿಗೆ ಹೊಂಪುಳಿ ಹೋಗುವ ಮನ
ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ
ಮಲ್ಲಿಗೆ ಸಂಪಿಗೆ ಕೇದಗೆ ಕಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ
ರೋಮಾಂಚನಗೊಳುವಾತನಾ ಮನ
ಎಲ್ಲಿದ್ದರೆ ಏನ್ ಎಂತಿದ್ದರೆ ಏನ್
ಎಂದೆಂದಿಗು ತಾನ್ ಕನ್ನಡವೇ ಸತ್ಯ
ಕನ್ನಡವೇ ನಿತ್ಯ ಅನ್ಯವೆನಲದೇ ಮಿಥ್ಯ

ಸಾಹಿತ್ಯ – ಕುವೆಂಪು
ಸಂಗೀತ – ಉಪೇಂದ್ರ ಕುಮಾರ್
ಗಾಯನ – ಶಿವಮೊಗ್ಗ ಸುಬ್ಬಣ್ಣ

download elaadaru iru entaadaru iru

 

ಟ್ಯಾಗ್ ಗಳು: , , , , , , ,

ಮರೆಗೆ ನಿಂತು ಕಾಯುತಿರುವ / marege nintu kaayutiruva

click to play

ಮರೆಗೆ ನಿಂತು ಕಾಯುತಿರುವ ಕರುಳು ಯಾವುದು

ಸಾವಿರ ಸೋಜಿಗವ ತೆರೆವ ಬೆರಳು ಯಾವುದು ||

ಸುತ್ತ ಹೊಳೆವ ಹಸಿರಲಿ

ಮತ್ತೆ ಪಕ್ಷಿ ದನಿಯಲಿ

ಎತ್ತೆತ್ತಲು ಅಲೆದು ಬಂದು

ಮಳೆ ಚೆಲ್ಲುವ ಮುಗಿಲಲಿ || ಮರೆಗೆ ||

ಕಣ್ಣ ಕೊಟ್ಟು ಹಗಲಿಗೆ

ಕಪ್ಪನಿಟ್ಟು ಇರುಳಿಗೆ

ಇನ್ನಿಲ್ಲದ ಬಣ್ಣ ಬಳಿದು

ಚಿಟ್ಟೆಯಂತ ಮರುಳಿಗೆ || ಮರೆಗೆ ||

ಹೊರಗೆ ನಿಂತು ದುಡಿಯುವ

ಫಲ ಬಯಸದೆ ಸಲಹುವ

ತಾಯಿ ಜೀವವೆ ನಮೋ

ಕಾಯ್ವ ಕರುಣೆಯೇ ನಮೋ || ಮರೆಗೆ ||

ಸಾಹಿತ್ಯ – ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ಸಂಗೀತ – ?
ಗಾಯನ – ಶಿವಮೊಗ್ಗ ಸುಬ್ಬಣ್ಣ

download marege nintu kaayutiruva

 

ಟ್ಯಾಗ್ ಗಳು: , , , , , , ,

ಬಾರಿಸು ಕನ್ನಡ ಡಿಂಡಿಮವ / baarisu kannada dimdimava

click to play

ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು ।। ಬಾರಿಸು ।।

ಕ್ಷಯಿಸೆಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ ।। ಬಾರಿಸು ।।

ಸಾಹಿತ್ಯ – ಕುವೆಂಪು
ಸಂಗೀತ –  ಸಿ ಅಶ್ವಥ್
ಗಾಯನ – ಶಿವಮೊಗ್ಗ ಸುಬ್ಬಣ್ಣ
 
download baarisu kannada dimdimava
 

ಟ್ಯಾಗ್ ಗಳು: , , , , , , , ,

ಯಾಕೆ ಕಾಡುತಿದೆ ಸುಮ್ಮನೆ ನನ್ನನು / yaake kaadutide summane nannanu

click to play

ಯಾಕೆ ಕಾಡುತಿದೆ ಸುಮ್ಮನೆ ನನ್ನನು
ಯಾವುದು ಈ ರಾಗ ।।
ಒಂದೇ ಸಮನೆ ಹಾಯುತಲಿದೆ ಅರಿವಿಗೆ
ಗುರುತೇ ತಪ್ಪಿದಾಗ ।। ಯಾಕೆ ।।

ಯಾವುದೋ ವಸಂತ ರಾತ್ರಿಯಲಿ
ಹೊಳೆದ ತಾರೆ ನೆನಪಾಗುತಿದೆ ।।
ಮಸುಕು ನೆನಪುಗಳ ಮಳೆಯಲ್ಲಿ
ಮನಸು ಒಂದೇ ಸಮ ತೋಯುತಿದೆ ।। ಯಾಕೆ ।।

ಕರುಳ ಕೊರೆವ ಚಳಿ ಇರುಳಿನಲಿ
ಪ್ರಾಣಕೆ ಮೊಳೆಯುವ ನೋವಿನಲಿ ।।
ಅರಸಿ ಅಲೆವೆ ನಾ ಸುರಿಸುತ ಕಂಬನಿ
ಕಳೆದ ರಾಗಗಳ ಕೊರಗಿನಲಿ ।। ಯಾಕೆ ।।

ಸಾಹಿತ್ಯ – ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ

ಸಂಗೀತ – ಶಿವಮೊಗ್ಗ ಸುಬ್ಬಣ್ಣ

ಗಾಯನ – ಮಾಲತಿ ಶರ್ಮ

download yaake kaadutide summane nannanu

 

 

ಟ್ಯಾಗ್ ಗಳು: , , , , , , , ,

ಆನಂದಮಯ / Anandamaya

click to play

ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ

ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.

ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.

ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.

ಸಾಹಿತ್ಯ – ಕುವೆಂಪು
ಸಂಗೀತ – ಸಿ ಅಶ್ವಥ್
ಗಾಯನ – ಶಿವಮೊಗ್ಗ ಸುಬ್ಬಣ್ಣ

download anandamaya ee jaga hrudaya

 

ಟ್ಯಾಗ್ ಗಳು: , , , , , ,

ಅಳುವ ಕಡಲೊಳು ತೇಲಿ ಬರುತಲಿದೆ / Aluva Kadalolu teli

click to play

ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿದೋಣಿ
ಬಾಳ ಗಂಗೆಯ ಮಹಾಪೂರದೊಳು ಸಾವಿನೊಂದು ವೇಣಿ
ನೆರೆತಿದೆ ಬೆರೆತಿದೆ ಕುಣಿವ ಮೊರೆವ ತೆರೆತೆರೆಗಳೋಣಿಯಲ್ಲಿ
ಜನನ ಮರಣಗಳ ಉಬ್ಬು ತಗ್ಗು ಹೊರಳುರುಳುವಾಟವಲ್ಲಿ

ಆಶೆ ಬೂದಿ ತಳದಲ್ಲು ಕೆರಳುತಿವೆ ಕಿಡಿಗಳೆನಿತೋ ಮರಳಿ
ಮುರಿದು ಬಿದ್ದ ಮನ ಮರದ ಕೊರಡೊಳು ಹೂವು ಹೂವು ಅರಳಿ
ಕೂಡಲಾರದೆದೆಯಾಳದಲ್ಲೂ ಕಂಡೀತು ಏಕಸೂತ್ರ
ಕಂಡುದುಂಟು ಬೆಸೆದೆದೆಗಳಲ್ಲು ಭಿನ್ನತೆಯ ವಿಕಟ ಹಾಸ್ಯ

ಎತ್ತರೆತ್ತರೆಕೆ ಏರುವ ಮನಕೂ ಕೆಸರ ಲೇಪ, ಲೇಪ;
ಕೊಳೆಯು ಕೊಳೆಚೆಯಲಿ ಮುಳುಗಿ ಕಂಡನೋ ಬಾನಿನೊಂದು ಪೆಂಪ
ತುಂಬುಗತ್ತಲಿನ ಬಸಿರನಾಳುತಿದೆ ಒಂದು ಅಗ್ನಿ ಪಿಂಡ
ತಮದಗಾಧ ಹೊನಲಲ್ಲು ಹೊಳೆಯುತಿದೆ ಸತ್ವವೊಂದಖಂಡ !

ಆಶೆ ಎಂಬ ತಳವೊಡೆದ ದೋಣಿಯಲಿ ದೂರ ತೀರ ಯಾನ
ಯಾರ ಲೀಲೆಗೋ ಯಾರೋ ಏನೋ ಗುರಿ ಇರದೆ ಬಿಟ್ಟ ಬಾಣ
ಇದು ಬಾಳು ನೋಡು ಇದ ತಿಳಿದೆನೆಂದರೂ ತಿಳಿದ ಧೀರನಿಲ್ಲ
ಹಲವುತನದ ಮೈಮರೆಸುವಾಟವಿದು ನಿಜವು ತೋರದಲ್ಲ

ಸಾಹಿತ್ಯ – ಗೋಪಾಲಕೃಷ್ಣ ಅಡಿಗ
ಸಂಗೀತ / ಗಾಯನ – ಶಿವಮೊಗ್ಗ ಸುಬ್ಬಣ್ಣ

download aluva kadalolu teli barutalide

 

ಟ್ಯಾಗ್ ಗಳು: , , , , ,