RSS

Category Archives: ಸುಬ್ರಾಯ ಚೊಕ್ಕಾಡಿ

ದಿನ ಹೀಗೆ ಜಾರಿ ಹೋಗಿದೆ / dina heege jaari hogide

click to play

[audio http://cl.ly/1W2S1H2a2k0e/dina_heege_jaari_hogide.mp3]

ದಿನ ಹೀಗೆ ಜಾರಿ ಹೋಗಿದೆ
ನೀನೀಗ ಬಾರದೆ
ಜತೆಯಿರದ ಬಾಳ ಜಾತ್ರೆಯಲಿ
ಸೊಗಸೇನಿದೆ ।।

ಅರಳಿ ಅನೇಕ ಹೂಗಳು
ಬರಿದೆ ಕಾದಿವೆ
ಹಿಮದ ಕಠೋರ ಕೈಯಲಿ
ನರಳಿ ಕೆಡೆದಿವೆ ।। ದಿನ ।।

ಜತೆಯ ಕಾಣದೀಗ ಹಕ್ಕಿ
ಅನಾಥವಾಗಿದೆ
ಋತು ಚೈತ್ರ ಜಾರಿ ಹೋಗಿದೆ
ಗ್ರೀಷ್ಮ ಬರುತಿದೆ ।। ದಿನ ।।

ದುಗುಡ ನಿಧಾನ ಬೆಳೆಯುತ
ಬಾಳ ಮುಸುಕಿದೆ
ಉಳಿದೇನಿತಾಂತ ಕಾಯುತ
ಕನಸು ಮಾಸಿದೆ ।। ದಿನ ।।

ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ –  ನರಸಿಂಹ ನಾಯಕ್

download dina heege jaari hogide

 

 

ಟ್ಯಾಗ್ ಗಳು: , , , ,

ಎಂಥಾ ದಿನಗಳವು / enthaa dinagalavu

click to play

ಎಂಥಾ ದಿನಗಳವು ಮರೆಯಾಗಿ ಹೋದವು
ಮಿಂಚಂಥ ಕ್ಷಣಗಳವು ಇನ್ನೆಂದೂ ಬಾರವು ||

ಸುರಿವ ಮಳೆಗೆ ದೋಣಿಯನ್ನು ತೇಲಿ ಬಿಟ್ಟೆವು,
ಚಿಟ್ಟೆ ಹೂವ ಗೊಂದಲದಲಿ ನಕ್ಕು ನಲಿದೆವು
ಮುಗಿಲ ಬಣ್ಣ ಚಂದ್ರ ತಾರೆ ಹಾಡ ಹಿಡಿದೆವು
ಮುಂದೆ ನುಗ್ಗಲೇನೋ ಬಡಿದು ಕೆಳಗೆ ಕುಸಿದೆವು || ಎಂಥಾ ||

ಹಕ್ಕಿ ಬೆನ್ನನೇರಿ ಗಗನ ಮೀರಿ ನೆಗೆದೆವು
ಇಂದ್ರ ಚಾಪದಲ್ಲಿ ಕೈ ಕೈ ಬೆಸೆದು ನಡೆದೆವು
ಈಗ ಹಕ್ಕಿ ರೆಕ್ಕೆ ಮುರಿದು ಧರೆಗೆ ಉರುಳಿದೆ
ಕಿಸೆಯಲಿಟ್ಟ ಬಿಲ್ಲ ತುಣುಕು ಕಳೆದು ಹೋಗಿದೆ || ಎಂಥಾ ||

ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ಸಂಗೀತ ಕಟ್ಟಿ ಕುಲಕರ್ಣಿ / ಅಜಯ್ ವಾರಿಯರ್

download enthaa dinagalavu

 

ಟ್ಯಾಗ್ ಗಳು: , , , , , ,

ಸಂಜೆಯ ರಾಗಕೆ ಬಾನು ಕೆಂಪೇರಿದೆ / sanjeya raagake baanu

click to play

ಸಂಜೆಯ ರಾಗಕೆ ಬಾನು ಕೆಂಪೇರಿದೆ
ತಿಂಗಳು ಮೂಡಿ ಬೆಳಕಿನ ಕೋಡಿ ಚೆಲ್ಲಾಡಿದೆ,
ಈಗ ರಂಗೇರಿದೆ ||

ಮರಗಿಡ ನೆಲದ ಮೇಲೆ ನೆರಳನು ಹಾಸಿದೆ
ಹೂಗಳ ದಳಗಳ ನಡುವೆ ನಿನ್ನದೇ ಬೆರಳಿದೆ ||

ಗಾಳಿಯ ಜೊತೆಯ ಗಂಧವು ನಿನ್ನನ್ನು ಸವರಿದೆ
ಒಳಗೂ ಹೊರಗೂ ವ್ಯಾಪಿಸಿ ಯೌವ್ವನ ಕೆರಳಿದೆ ||

ಕೊಳದಲಿ ಮೂಡಿದ ಬಿಂಬವು ಹೂಗಳ ಮರೆಸಿದೆ
ದಳದಲಿ ಎಂತಹ ಕನಸಿನ ಲೋಕವು ತೆರೆದಿದೆ ||

ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ನರಸಿಂಹ ನಾಯಕ್

download sanjeya raagake baanu kemperide

 

ಟ್ಯಾಗ್ ಗಳು: , , , , , ,